ಒಮ್ಮೆ ಒಬ್ಬ ಅಂಧ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಐದು ವೇಳೆಯ ನಮಾಝ್‌ಗಳಿಗೆ ನನ್ನ ಕೈ ಹಿಡಿದು ಮಸೀದಿಗೆ ಕರೆತರಲು ನನಗೆ ಯಾವುದೇ ಸಹಾಯಕರಿಲ್ಲ." ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಾಮೂಹಿಕ ನಮಾಝ್ (ಜಮಾಅತ್) ಗೆ ಹಾಜರಾಗದಿರಲು ತನಗೆ ರಿಯಾಯಿತಿ ನೀಡಬೇಕೆಂದು ಅವರು ಬಯಸಿದ್ದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ರಿಯಾಯಿತಿ ನೀಡಿದರು. ಆದರೆ ಆ ವ್ಯಕ್ತಿ ಅಲ್ಲಿಂದ ಹೊರಡುವಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರನ್ನು ಕರೆದು ಕೇಳಿದರು: "ತಮಗೆ ನಮಾಝ್‌ಗೆ ಕರೆಯುವ ಅಝಾನ್ ಕೇಳುತ್ತದೆಯೇ?" ಆ ವ್ಯಕ್ತಿ ಹೌದು ಎಂದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ಹಾಗಾದರೆ ನೀವು ನಮಾಝ್‌ಗೆ ಕರೆ ನೀಡುವವನಿಗೆ ಉತ್ತರ ನೀಡಬೇಕು."