ಅಸಭ್ಯವಾಗಿ ಮಾತನಾಡುವುದು ಅಥವಾ ಅಸಭ್ಯವಾಗಿ ವರ್ತಿಸುವುದು ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಡವಳಿಕೆಯಾಗಿರಲಿಲ್ಲ. ಅವರು ಅಸಭ್ಯವನ್ನು ಬಯಸುತ್ತಿರಲಿಲ್ಲ ಮತ್ತು ಉದ್ದೇಶಪೂರ್ವಕ ಅಸಭ್ಯವಾಗಿ ವರ್ತಿಸುತ್ತಿರಲಿಲ್ಲ. ಬದಲಿಗೆ, ಅವರು ಅನುಕರಣಾಯೋಗ್ಯವಾದ ಅತ್ಯುತ್ತಮ ಚಾರಿತ್ರ್ಯವನ್ನು ಹೊಂದಿದ್ದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳುತ್ತಿದ್ದರು: "ಅಲ್ಲಾಹನ ದೃಷ್ಟಿಯಲ್ಲಿ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು." ಉತ್ತಮ ನಡವಳಿಕೆ ಎಂದರೆ ಜನರಿಗೆ ಒಳಿತು ಮಾಡುವುದು, ಮಂದಹಾಸ ಬೀರುವುದು, ಜನರಿಗೆ ತೊಂದರೆ ಕೊಡದಿರುವುದು, ಜನರಿಂದ ಉಂಟಾಗುವ ತೊಂದರೆಗಳನ್ನು ಸಹಿಸುವುದು ಮತ್ತು ಜನರೊಡನೆ ಸುಂದರವಾಗಿ ಬೆರೆಯುವುದು.